ಪಾವಗಡ: ಅಕ್ಕ, ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಉದ್ದಂಡಪ್ಪನ ಪಾಳ್ಯದಲ್ಲಿ ಗುರುವಾರ ರಾತ್ರಿ ನಡೆದಿದೆ.
ಉದ್ದಂಡಪ್ಪನ ಪಾಳ್ಯದ ಗೊಲ್ಲ ನರಸಪ್ಪನ ಮಕ್ಕಳಾದ ಸಂಧ್ಯಾ (17), ಶಾಂತಿ (21) ಆತ್ಮಹತ್ಯೆ ಮಾಡಿಕೊಂಡವರು.
ಸಂಧ್ಯಾ ದ್ವಿತೀಯ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಯಲ್ಲೂ ಫೇಲಾಗಿದ್ದರಿಂದ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ನೋಡಿದ ಈಕೆಯ ಅಕ್ಕ ಶಾಂತಿಯೂ ಸಹ ಇವಳ ಜತೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರೂ ತಕ್ಷಣಕ್ಕೆ ಮನೆಯವರ ಗಮನಕ್ಕೆ ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.