ADVERTISEMENT

ಅಕ್ರಮ ಗಣಿಗಾರಿಕೆ ಹಗರಣ: ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ದಾಖಲು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 12:25 IST
Last Updated 16 ಅಕ್ಟೋಬರ್ 2012, 12:25 IST

ಬೆಂಗಳೂರು (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಕ್ಕಳಾದ ಬಿ.ವೈ. ವಿಜಯೇಂದ್ರ, ಬಿ.ವೈ. ರಾಘವೇಂದ್ರ ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಸಿಬಿಐ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಐಪಿಸಿ ಯ ಹಲವು ಸೆಕ್ಷನ್ ಗಳ ಅಡಿ ಆರೋಪಪಟ್ಟಿ ದಾಖಲಿಸಿತು.

ಕಳೆದ ಮೇ ತಿಂಗಳಿನಲ್ಲಿ ಸುಪ್ರೀಂಕೋರ್ಟ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರರ ವಿರುದ್ಧ ತನಿಖೆ ನಡೆಸುವಂತ ಸಿಬಿಐಗೆ ನಿರ್ದೆಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.