ADVERTISEMENT

ಅಕ್ರಮ ಡಿನೋಟಿಫೈ ಆರೋಪದ ಪ್ರಕರಣ: ಎಸಿಬಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 4 ಮೇ 2018, 11:48 IST
Last Updated 4 ಮೇ 2018, 11:48 IST
ಅಕ್ರಮ ಡಿನೋಟಿಫೈ ಆರೋಪದ ಪ್ರಕರಣ: ಎಸಿಬಿಗೆ ನೋಟಿಸ್
ಅಕ್ರಮ ಡಿನೋಟಿಫೈ ಆರೋಪದ ಪ್ರಕರಣ: ಎಸಿಬಿಗೆ ನೋಟಿಸ್   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ‌.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರ್.ಎಂ.ವಿ‌ ಬಡಾವಣೆ ಎರಡನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ 14 ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಪ್ರಕರಣ ಸಂಬಂಧ ರಾಜ್ಯ ಕಂದಾಯ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಎಸಿಬಿಯ ಡಿಎಸ್ಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ‌ ನೀಡಿದೆ.

ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ವಿಚಾರಣೆ ನಡೆಸಿತು.

ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಈ ಪಿಐಎಲ್ ಸಲ್ಲಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ADVERTISEMENT

ಬಿ ರಿಪೋರ್ಟ್ ತನಿಖೆ ಅವಶ್ಯಕತೆ ಇಲ್ಲವೆಂದು ಎಸಿಬಿ ಹಿಂಬರಹ ನೀಡಿತ್ತು. ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.