
ಪ್ರಜಾವಾಣಿ ವಾರ್ತೆಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿಯ ಕೆಲ ಶಾಸಕರು ಅಡ್ಡ ಮತದಾನ ಮಾಡಿರುವುದನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರನ್ನು ಪತ್ತೆಹಚ್ಚಲು ಸಮಿತಿಯೊಂದನ್ನು ರಚಿಸಲಿದ್ದಾರೆ.
ಈ ವಿಷಯವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ `ಪ್ರಜಾವಾಣಿ~ಗೆ ತಿಳಿಸಿದರು.
`ಇದು ಬೇಸರದ ಸಂಗತಿ. ಆದರೆ, ಈ ಕೃತ್ಯ ಎಸಗಿದವರನ್ನು ಪತ್ತೆಹಚ್ಚುವವರೆಗೂ ವಿರಮಿಸುವುದಿಲ್ಲ. ವರಿಷ್ಠರು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ~ ಎಂದು ಅವರು ಹೇಳಿದರು.
ಪಕ್ಷ ವಿರೋಧಿ ಕೆಲಸವನ್ನು ಯಾರು ಮಾಡಿದ್ದಾರೆ ಎಂಬುದನ್ನು ನಿಖರವಾಗಿ ಹೇಳುವುದು ಕಷ್ಟ. ಈ ಕುರಿತು ತನಿಖೆ ನಡೆಸುವ ಸಲುವಾಗಿಯೇ ಸಮಿತಿ ರಚಿಸಲಾಗುವುದು~ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.