ADVERTISEMENT

ಅಣ್ಣಾ ಹಜಾರೆಗೆ `ಬಸವ ಕೃಷಿ' ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2013, 19:59 IST
Last Updated 5 ಜನವರಿ 2013, 19:59 IST
ಅಣ್ಣಾ ಹಜಾರೆ
ಅಣ್ಣಾ ಹಜಾರೆ   

ಕೊಪ್ಪಳ: ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಮಹಾಪೀಠವು ನೀಡುವ 2013ನೇ ಸಾಲಿನ `ಬಸವ ಕೃಷಿ' ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಆಯ್ಕೆ ಮಾಡಲಾಗಿದೆ. ಇದು 50 ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರು. ಜ. 16ರಂದು ಕೂಡಲಸಂಗಮದಲ್ಲಿ ನಡೆಯುವ ಕೃಷಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಕೃಷಿಯಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಪೀಠವು ಕಳೆದ ವರ್ಷದಿಂದ ಈ ಪ್ರಶಸ್ತಿ ಕೊಡುತ್ತಿದ್ದು ಕಳೆದ ವರ್ಷ ಪ್ರಶಸ್ತಿಯನ್ನು ಜಲತಜ್ಞ ಖ್ಯಾತಿಯ, ರಾಜಸ್ತಾನದ ರಾಜೇಂದ್ರಸಿಂಗ್ ಅವರಿಗೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.