ADVERTISEMENT

ಅಧಿಕಾರಿಗಳ ವರ್ಗ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 19:30 IST
Last Updated 2 ಏಪ್ರಿಲ್ 2018, 19:30 IST

ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಆರು ಜಿಲ್ಲೆಗಳ ಅಬಕಾರಿ ಡೆಪ್ಯುಟಿ ಕಮಿಷನರ್, 25 ಜಿಲ್ಲೆಗಳ ಡೆಪ್ಯುಟಿ ಸೂಪರ್‌ವೈಸರ್ ಮತ್ತು 169 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ಸ್ವಂತ ಜಿಲ್ಲೆಯಲ್ಲಿ ಅಥವಾ ಮೂರು ವರ್ಷಕ್ಕೂ ಹೆಚ್ಚು ಕಾಲ ಒಂದೇ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಚುನಾವಣಾ ಆಯೋಗ ನೀಡಿರುವ ಸೂಚನೆಯಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT