ADVERTISEMENT

ಅಧಿಕಾರಿಗಳ ವಿದೇಶ ಪ್ರವಾಸ ಇಲ್ಲ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2012, 19:30 IST
Last Updated 21 ಏಪ್ರಿಲ್ 2012, 19:30 IST

ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಅಧಿಕಾರಿಗಳು ವಿದೇಶ ಪ್ರವಾಸ ಕೈಗೊಳ್ಳುವುದನ್ನು ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರು ಶನಿವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ಈ ಸೂಚನೆಯನ್ನು ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖೆಗಳ ಮುಖ್ಯಸ್ಥರು, ಇತರ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದ 123 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಬರ ನಿರ್ವಹಣೆ ಮತ್ತು ಬರ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕಾಗಿದೆ ಎಂದರು.

ಇದೇ 19ರಂದು ನಡೆದ ಸರ್ವ ಪಕ್ಷಗಳ ಸಭೆ ನಂತರ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಅಧಿಕಾರಿಗಳು ವಿದೇಶ ಪ್ರವಾಸ ಕೈಗೊಳ್ಳುವುದನ್ನು ನಿಷೇಧಿಸುವುದಾಗಿ ಹೇಳಿದ್ದರು. ಆ ಪ್ರಕಾರ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.