ADVERTISEMENT

ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಜೂನ್ 2012, 19:30 IST
Last Updated 5 ಜೂನ್ 2012, 19:30 IST

ಹುಬ್ಬಳ್ಳಿ: `ಭೂಮಿ ಡಿನೋಟಿಫಿಕೇಷನ್ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿರುವ ಸಿಬಿಐ, ಅದೇ ಎಫ್‌ಐಆರ್‌ನಲ್ಲಿ ಆ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಹೆಸರನ್ನೂ ದಾಖಲಿಸಿ ಕ್ರಮಕೈಗೊಳ್ಳಬೇಕು~ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ.

`ಡಿನೋಟಿಫಿಕೇಷನ್ ಹಗರಣದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಸಿಬಿಐ ಪತ್ತೆ ಮಾಡಬೇಕು. ನಗರಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ, ಬಿಡಿಎ ಮುಖ್ಯಸ್ಥ ಮತ್ತು ವಿಶೇಷ ಜಿಲ್ಲಾಧಿಕಾರಿ ಎಚ್.ರಾಮಾಂಜನೇಯ ಹೆಸರನ್ನೂ ಆ ಎಫ್‌ಐಆರ್‌ನಲ್ಲಿ ಸೇರಿಸಬೇಕು~ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.