ADVERTISEMENT

ಅಧಿವೇಶನಕ್ಕೆ ಅಧಿಸೂಚನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2012, 19:30 IST
Last Updated 5 ಜುಲೈ 2012, 19:30 IST

ಬೆಂಗಳೂರು: ಇದೇ 16ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಹನ್ನೊಂದು ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಜುಲೈ 16ರಿಂದ 30ರವರೆಗೆ ಅಧಿವೇಶನ ನಡೆಸಲು ವಿಧಾನಮಂಡಲ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಜು.16ರಿಂದ 20ರವರೆಗೆ, ಜು.23ರಿಂದ 27ರವರೆಗೆ ಹಾಗೂ ಜುಲೈ 30ರಂದು ಕಲಾಪ ನಡೆಯಲಿದೆ. ಶನಿವಾರ ಮತ್ತು ಭಾನುವಾರಗಳಂದು ಕಲಾಪ ನಡೆಯುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.