ಬೆಂಗಳೂರು: ಮುಖ್ಯಮಂತ್ರಿಗಳೇ, ನಿಮಗೆ ತಾಕತ್ತಿದ್ದರೆ ಅನಂತ ಕುಮಾರ ಹೆಗಡೆ ಅವರನ್ನು ರಾಜಕೀಯವಾಗಿ ಎದುರಿಸಿ. ಅದನ್ನು ಬಿಟ್ಟು ಈ ರೀತಿಯ ಪ್ರಯತ್ನ ಮಾಡಿದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಆಗ ನಿಮ್ಮನ್ನು ಯಾರೂ ಕಾಪಾಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ.
ಮಂಗಳವಾರ ರಾತ್ರಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಅವರ ಕಾರಿಗೆ ಲಾರಿಯೊಂದು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಯಲು ಬಂದ ಘಟನೆ ಬಗ್ಗೆ ಪ್ರತಾಪ್ ಸಿಂಹ ಈ ರೀತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.