ಬೆಂಗಳೂರು: `ಶಾಸಕರಾದ ಲಕ್ಷ್ಮಣ ಸವದಿ, ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರನ್ನು ಅನರ್ಹಗೊಳಿಸುವ ಸಂಬಂಧ ವಿಧಾನಸಭಾಧ್ಯಕ್ಷರೇ ತೀರ್ಮಾನ ಕೈಗೊಳ್ಳಬೇಕು~ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಹೇಳಿದರು.
ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆ ಮೂವರು ಶಾಸಕರನ್ನು ಅನರ್ಹಗೊಳಿಸುವ ವಿಷಯ ಸದನದಲ್ಲೇ ನಿರ್ಧಾರವಾಗಬೇಕು~ ಎಂದರು.
`ರಾಜ್ಯಪಾಲನಾದ ನಾನು ಸಂವಿಧಾನದ ಭಾಗವಷ್ಟೇ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ನನಗೆ ಇಲ್ಲ. ಆ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ವಿಧಾನಸಭಾಧ್ಯಕ್ಷರಿಗೆ ಇದೆ~ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.