ADVERTISEMENT

ಅನಿವಾಸಿಗಳ ವಿರುದ್ಧ ಸಚಿವ ಖಾದರ್ ಟೀಕೆ: ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 19:30 IST
Last Updated 28 ಫೆಬ್ರುವರಿ 2018, 19:30 IST

ಮಂಗಳೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಸಮಾರಂಭವೊಂದರಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌ ಗಲ್ಫ್‌ ರಾಷ್ಟ್ರಗಳಲ್ಲಿರುವ ಅನಿವಾಸಿ ಕನ್ನಡಿಗರ ಕುರಿತು ಆಡಿರುವ ಮಾತಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಸಚಿವರ ಮಾತಿನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ‘ಊರಲ್ಲಿ ಢೋಂಗಿ ಮಾಡಿ ಗಲ್ಫ್‌ಗೆ ಹೋಗುತ್ತಾರೆ’ ಎಂದು ಹೇಳಿರುವುದು ಈ ವಿಡಿಯೊದಲ್ಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಿವಾಸಿ ಕನ್ನಡಿಗರು ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕೂಡ ವಿರೋಧಿಸಿ, ಪತ್ರಿಕಾ ಹೇಳಿಕೆ ನೀಡಿರುವ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್‌, ಸಚಿವರು ಅನಿವಾಸಿ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.