ಬೆಂಗಳೂರು: ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿ ರಾಜ್ಯಕ್ಕೆ ಹಿಂದಿರುಗಿದ ಡಿ.ವಿ. ಸದಾನಂದ ಗೌಡರನ್ನು ಬೆಂಬಲಿಗ ಸಚಿವರು, ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು `ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ~ದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಹುಪಾಲು ಕಾರ್ಯಕರ್ತರ ಕಣ್ಣಾಲಿಗಳು ತೇವಗೊಂಡಿದ್ದವು.
ಆದರೆ ಯಾರೂ ಏನೂ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ಮಾತನ್ನು ಆಲಿಸಿದ ಡಿವಿಎಸ್ ಹಾಗೂ ಸುರೇಶ್‌ಕುಮಾರ್ ಗದ್ಗದಿತರಾದರೂ ಪ್ರತಿಕ್ರಿಯೆ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.