ADVERTISEMENT

ಅಭಿವೃದ್ಧಿಗೆ ಹಣ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2012, 19:30 IST
Last Updated 1 ಆಗಸ್ಟ್ 2012, 19:30 IST

ಬೆಂಗಳೂರು: ರಾಜ್ಯ ಸರ್ಕಾರ 2009-10ರಿಂದ 2011-12ರವರೆಗೆ ಹೊರ ರಾಜ್ಯದಲ್ಲಿರುವ ಧಾರ್ಮಿಕ ಸಂಸ್ಥೆಗಳಿಗೆ 34.35 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದೇ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ 439.57 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ ಅವರ ಪ್ರಶ್ನೆಗಳಿಗೆ ಬುಧವಾರ ವಿಧಾನಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ವಿವರ ಒದಗಿಸಿದ್ದಾರೆ.


ಪ್ರಸಕ್ತ ಹಣಕಾಸು ವರ್ಷ ರಾಜ್ಯದ 2,160 ದೇವಾಲಯಗಳಿಗೆ 51.34 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.