ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಒಟ್ಟು 4,692 ಮಂದಿ ದಿನಗೂಲಿ ನೌಕರರು ಕೆಲಸ ಮಾಡುತ್ತಿದ್ದು, ಇವರ ಸೇವೆ ಕಾಯಂ ಮಾಡುವ ಬಗ್ಗೆ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಅದರ ವರದಿ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವ ಸಿ.ಎಚ್.ವಿಜಯಶಂಕರ್ ಸೋಮವಾರ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು ‘ಸುಪ್ರೀಂಕೋರ್ಟ್‌ನ ಕೆಲ ತೀರ್ಪಿಗಳು ಹಿನ್ನೆಲೆಯಲ್ಲಿ ದಿನಗೂಲಿ ನೌಕರರ ಸೇವೆಯನ್ನು ಕಾಯಂ ಮಾಡಲು ಆಗುತ್ತಿಲ್ಲ. ಹೀಗಾಗಿ ಸಂಪುಟ ಉಪ ಸಮಿತಿಯ ಸಲಹೆ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.