
ಬೆಂಗಳೂರು: ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಅವಧಿಯನ್ನು ಇದೇ 15ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲು ಮೇ 25ರವರೆಗೆ ವರ್ಗಾವಣೆಗೆ ಅನುಮತಿ ನೀಡಲಾಗಿತ್ತು. ವಿಧಾನ ಪರಿಷತ್ ಚುನಾವಣೆ ಘೋಷಣೆ ಇತ್ಯಾದಿ ಕಾರಣಗಳಿಂದ ಇನ್ನೂ ಕೆಲ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ.
ಹೀಗಾಗಿ ವರ್ಗಾವಣೆ ಅವಧಿಯನ್ನು 20 ದಿನ ಮುಂದಕ್ಕೆ ಹಾಕಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.