ದಾವಣಗೆರೆ: ಅವರಿಗೇನು ಕನಸು ಬಿದ್ದಿತ್ತೇ?
- `ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೇವಲ ಒಂದು ವರ್ಷ ಇರುತ್ತಾರೆ' ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ತೋಟಗಾರಿಕೆ ಮತ್ತು ಎಪಿಎಂಸಿ ಸಚಿವ ಶಾಮನೂರು ಶಿವಶಂಕರಪ್ಪ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದು ಹೀಗೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಿದ್ದರಾಮಯ್ಯ ಐದು ವರ್ಷವೂ ಮುಖ್ಯಮಂತ್ರಿಯಾಗಿರುತ್ತಾರೆ. ಯಡಿಯೂರಪ್ಪ ಅವರಿಗಾಗಲೀ, ಜನರಿಗಾಗಲೀ ಭಯ ಬೇಡ' ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ. ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹಣಕಾಸಿನ ಕೊರತೆ ಇಲ್ಲ. ಕೇಂದ್ರ ಸಚಿವರೊಂದಿಗೆ ವ್ಯವಹರಿಸಿ ಹೆಚ್ಚಿನ ಅನುದಾನ ತರಲಾಗುವುದು.
ಬೆಳೆಗಾರರಿಗೆ ಹೆಚ್ಚಿನ ಸಬ್ಸಿಡಿ ಕೊಡಿಸಲಾಗುವುದು. ಪುಷ್ಪೋದ್ಯಮ ಹಾಗೂ ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ ನೀಡಲಾಗುವುದು. ಅದರಲ್ಲೂ ದಾಳಿಂಬೆ, ದ್ರಾಕ್ಷಿ ಮೊದಲಾದ ಹಣ್ಣಿನ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲು ಪ್ರೋತ್ಸಾಹಿಸಲಾಗುವುದು. ರಫ್ತು ಮಾಡುವುದಕ್ಕೆ ಬಹಳಷ್ಟು ಅವಕಾಗಳಿವೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.