ADVERTISEMENT

ಅವಿರೋಧ ಆಯ್ಕೆಗೆ ವಾಟಾಳ್ ಮನವಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2013, 19:59 IST
Last Updated 2 ಆಗಸ್ಟ್ 2013, 19:59 IST

ಬೆಂಗಳೂರು: ಮೈಸೂರು ಮತ್ತು ಚಾಮರಾಜನಗರದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಯಲ್ಲಿ ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು `ಇತರ ಯಾವುದೇ ಪಕ್ಷದವರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದೆ ನನಗೆ ಬೆಂಬಲ ನೀಡಬೇಕು.ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು, ಅವರಿಂದ ಒಳ್ಳೆಯ ಪ್ರತಿಕ್ರಿಯೆ ದೊರೆತಿದೆ' ಎಂದರು. ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮನವಿ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.