ADVERTISEMENT

ಅವಿಶ್ವಾಸ ನಿರ್ಣಯ: ಯಥಾಸ್ಥಿತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 19:40 IST
Last Updated 5 ಮಾರ್ಚ್ 2018, 19:40 IST

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಷಯಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಂಡು ಹೋಗಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್‌ ಯಾದವ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಪಂಚಾಯತ್‌ ರಾಜ್‌ ಇಲಾಖೆ ಮುಖ್ಯ ಕಾರ್ಯದರ್ಶಿ, ಅರ್ಜಿದಾರರಿಗೆ ಸಂಬಂಧಿಸಿದ ಕ್ಷೇತ್ರಗಳ ಉಪ ವಿಭಾಗಾಧಿಕಾರಿಗಾರಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ಇದೇ 14ಕ್ಕೆ ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.