
ಪ್ರಜಾವಾಣಿ ವಾರ್ತೆಮಂಗಳೂರು: ಬಂಟ್ವಾಳ ತಾಲ್ಲೂಕಿನ ಅಮ್ಮುಂಜೆಯ ಕಲಾಯಿ ನಿವಾಸಿ, ಎಸ್‌ಡಿಪಿಐ ಕಾರ್ಯಕರ್ತ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣದ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳ ಪೈಕಿ ಮಂಗಳೂರಿನ ಪಡೀಲ್ ಸಮೀಪದ ಕರ್ಮಾರ್ ನಿವಾಸಿ ದಿವ್ಯರಾಜ್ ಶೆಟ್ಟಿ ಎಂಬಾತನನ್ನು ವಿಶೇಷ ತನಿಖಾ ತಂಡದ ಪೊಲೀಸರು ಸೋಮವಾರ ಬೆಳಿಗ್ಗೆ ಬಂಧಿಸಿದ್ದಾರೆ.
‘ದಿವ್ಯರಾಜ್ ಶೆಟ್ಟಿ ಮತ್ತು ಭರತ್ ಕುಮ್ಡೇಲು ಎಂಬುವವರು ಈ ಕೊಲೆಗೆ ಸಂಚು ರೂಪಿಸಿದ್ದರು. ಅವರೊಂದಿಗೆ ಮತ್ತಷ್ಟು ಯುವಕರು ಕೊಲೆಯಲ್ಲಿ ಭಾಗಿಯಾಗಿದ್ದರು. ಐದು ಮಂದಿ ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು. ಶೆಟ್ಟಿಯನ್ನು ಮಂಗಳೂರಿನ ಹೊರವಲಯದ ಸ್ಥಳವೊಂದರಲ್ಲಿ ಸೋಮವಾರ ಬೆಳಿಗ್ಗೆ ಬಂಧಿಸಲಾಗಿದೆ’ ಎಂದು ದಕ್ಷಿಣ ಕನ್ನಡ ಎಸ್‌ಪಿ ಸಿ.ಎಚ್.ಸುಧೀರ್‌ಕುಮಾರ್ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.