ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಆಗುಂಬೆಯಲ್ಲಿ 10 ಸೆಂ.ಮೀ. ಮತ್ತು ಖಾನಾಪುರದಲ್ಲಿ 7 ಸೆಂ.ಮೀ. ಮಂಗಳೂರು, ಮೂಡುಬಿದಿರೆ, ಧರ್ಮಸ್ಥಳ, ಜಗಲ್ಪೇಟೆಯಲ್ಲಿ ತಲಾ 5 ಸೆಂ.ಮೀ., ಪಣಂಬೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಗೇರುಸೊಪ್ಪ, ಮಂಕಿ, ಕದ್ರ, ಲೊಂಡಾದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.
ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.