ADVERTISEMENT

ಆದಾಯ ಪ್ರಮಾಣ ಪತ್ರ: ಹೊಸ ಮಾದರಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2011, 19:30 IST
Last Updated 7 ಜೂನ್ 2011, 19:30 IST

ಬೆಂಗಳೂರು: ಶುಲ್ಕ ರಿಯಾಯಿತಿಗಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ನೀಡುವ ಆದಾಯ ಪ್ರಮಾಣ ಪತ್ರ ಪಡೆಯಲು ಆಗುತ್ತಿರುವ ತೊಂದರೆಗಳಿಗೆ ತೆರೆ ಎಳೆಯುವ ದೃಷ್ಟಿಯಿಂದ ತಮಿಳುನಾಡು ಮಾದರಿಯನ್ನು ಅನುಸರಿಸುವಂತೆ ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ ಬುಧವಾರ ಇಲ್ಲಿ ಸಲಹೆ ಮಾಡಿದರು.

ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಂದ ಸ್ವಯಂ ಆದಾಯ ಘೋಷಣಾ ಪತ್ರವನ್ನು ಪಡೆದುಕೊಂಡು ಶಾಲಾ-ಕಾಲೇಜುಗಳಿಗೆ ನೇರವಾಗಿ ಪ್ರವೇಶ ನೀಡಲಾಗುತ್ತದೆ. ನಂತರ ಅದನ್ನು ಮುಖ್ಯೋಪಾಧ್ಯಾಯರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಿಕೊಡಲಾಗುತ್ತದೆ. ಅವರು ತಹಸೀಲ್ದಾರ್ ಕಚೇರಿಗೆ ಕಳುಹಿಸಿದ ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.