ADVERTISEMENT

ಆಪರೇಟರ್‌ಗಳ ಮುಷ್ಕರ ಅಂತ್ಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 19:59 IST
Last Updated 4 ಜೂನ್ 2013, 19:59 IST

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಡಾಟಾ ಎಂಟ್ರಿ ಆಪರೇಟರ್‌ಗಳು ಮುಷ್ಕರ ಕೈಬಿಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಪರೇಟರ್‌ಗಳು ಗ್ರಾಮಾಂತರ ಪ್ರದೇಶಗಳಲ್ಲಿ ಪಡಿತರ ಚೀಟಿ ವಿತರಣೆ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಕೆಲಸ ಸ್ಥಗಿತಗೊಳಿಸಿದ್ದರು.

ಈ ಕುರಿತು ಮೇ 23ರಂದು `ಪ್ರಜಾವಾಣಿ'ಯಲ್ಲಿ ವರದಿ ಪ್ರಕಟವಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಹಾಗೂ  ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ಆಪರೇಟರ್‌ಗಳ ಸಂಘದ ಪದಾಧಿಕಾರಿಗಳು, ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿದರು. `ನಿಮ್ಮ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ. ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು. ತಕ್ಷಣ ಕೆಲಸಕ್ಕೆ ವಾಪಸಾಗಿ ಎಂದು ಸಚಿವರು ಹೇಳಿದರು. ಅದರ ಅನ್ವಯ ಮುಷ್ಕರ ಕೈಬಿಡುತ್ತಿದ್ದೇವೆ' ಎಂದು ಸಂಘದ ಅಧ್ಯಕ್ಷ ರಂಗಾಚಾರಿ ಬಿ. ನಾರೋಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.