ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಉಪನ್ಯಾಸಕರ ನೇಮಕ ಕುರಿತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
152 ಟೆಲಿಕಮ್ಯೂನಿಕೇಷನ್ (ಎಲೆಕ್ಟ್ರಾನಿಕ್ಸ್); 153 ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯೋಗದ ಕಚೇರಿ ಹಾಗೂ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಭೂಗರ್ಭ ವಿಜ್ಞಾನ ಉಪನ್ಯಾಸಕರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಕ್ಷೇಪಣೆಗಳು ಇದ್ದಲ್ಲಿ 15 ದಿನಗಳ ಒಳಗೆ ಕಾರ್ಯದರ್ಶಿ, ಕೆಪಿಎಸ್‌ಸಿ, ಉದ್ಯೋಗ ಸೌಧ, ಬೆಂಗಳೂರು ಇವರಿಗೆ ಮನವಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.