ADVERTISEMENT

ಆರೋಪ ನಿರಾಧಾರ: ಭಾಸ್ಕರ್‌ ರಾವ್‌

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 19:30 IST
Last Updated 30 ಜೂನ್ 2015, 19:30 IST
ಲೋಕಾಯುಕ್ತದಲ್ಲಿ ನಡೆದಿರುವ ಅವ್ಯವಹಾರದ ಕುರಿತು ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಲೋಕಾಯುಕ್ತ ನ್ಯಾಯಮೂರ್ತಿ  ವೈ. ಭಾಸ್ಕರ್‌ರಾವ್‌ ಅವರು ಬಿಗಿ ಭದ್ರತೆಯಲ್ಲಿ ತೆರಳಿದರು   ಪ್ರಜಾವಾಣಿ ಚಿತ್ರ
ಲೋಕಾಯುಕ್ತದಲ್ಲಿ ನಡೆದಿರುವ ಅವ್ಯವಹಾರದ ಕುರಿತು ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್‌ರಾವ್‌ ಅವರು ಬಿಗಿ ಭದ್ರತೆಯಲ್ಲಿ ತೆರಳಿದರು ಪ್ರಜಾವಾಣಿ ಚಿತ್ರ   

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರದಲ್ಲಿ  ತಮ್ಮ ಮಗನ ಪಾತ್ರವನ್ನು ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್‌ ಅಲ್ಲಗಳೆದಿದ್ದಾರೆ.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದು ವ್ಯವಸ್ಥಿತ ಷಡ್ಯಂತ್ರ. ನನ್ನ ಮಗನ ಸಂಖ್ಯೆಯಿಂದ ಕರೆ ಹೋಗಿದೆ ಎಂದಿರುವ ದಿನ ಆತ ಹೈದರಾಬಾದ್‌ನಲ್ಲಿದ್ದ. ಈ ಪ್ರಕರಣದಲ್ಲಿ ನನ್ನ ಮಗನ ಪಾತ್ರವಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ಉದ್ದೇಶದಿಂದಲೇ ವಿಶೇಷ ತನಿಖಾ ತಂಡ ರಚಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೆ’ ಎಂದರು.

‘ನನ್ನ ಮೇಲಿನ ಆರೋಪ ನಿರಾಧಾರ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ವರದಿ ಬಂದ ನಂತರ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದರು.

* ಆರೋಪ ಎದುರಿಸುತ್ತಿರುವ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್‌ರಾವ್‌  ರಾಜೀನಾಮೆ ನೀಡುವುದು ಸೂಕ್ತ.
-ಎಚ್‌.ಡಿ.ದೇವೇಗೌಡ
ಜೆಡಿಎಸ್‌ ರಾಷ್ಟ್ರೀಯ ಅಧ್ಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.