ADVERTISEMENT

ಆರೋಪ ಸಾಬೀತಾದರೆ ಯಡಿಯೂರಪ್ಪ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2011, 16:35 IST
Last Updated 3 ಫೆಬ್ರುವರಿ 2011, 16:35 IST
ಆರೋಪ ಸಾಬೀತಾದರೆ ಯಡಿಯೂರಪ್ಪ ರಾಜೀನಾಮೆ
ಆರೋಪ ಸಾಬೀತಾದರೆ ಯಡಿಯೂರಪ್ಪ ರಾಜೀನಾಮೆ   


ಬೆಂಗಳೂರು:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಆರೋಪಗಳು ಸಾಬೀತಾದರೆ ಮಾತ್ರ ಅವರು  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ವಿರುದ್ಧದ ಆರೋಪಗಳ ಬಗ್ಗೆ ನ್ಯಾಯಾಂಗ ಮತ್ತು ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಅಲ್ಲಿಯವರೆಗೂ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಮಾಜಿ ಅಧ್ಯಕ್ಷ ರಾಜನಾಥ್‌ಸಿಂಗ್ ಗುರುವಾರ ಇಲ್ಲಿ ತಿಳಿಸಿದರು.

ಸುತ್ತೂರಿನ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಇಲ್ಲಿನ ಪಂಚತಾರಾ ಹೋಟೆಲ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಶಹಬಾಷ್‌ಗಿರಿ ಕೊಟ್ಟರು.

‘ಮೂಲಸೌಲಭ್ಯ ಮತ್ತು ಬಡತನ ನಿರ್ಮೂಲನೆ ವಿಚಾರದಲ್ಲಿ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆರೋಪ ಬಂದ ತಕ್ಷಣ ರಾಜೀನಾಮೆ ಕೊಡುವ ಅಗತ್ಯ ಇಲ್ಲ’ ಎಂದು ಹೇಳಿದರು.

‘ಪ್ರತಿಪಕ್ಷಗಳು ಮಾಡಿದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಸೂಚನೆ ನೀಡಲಾಗಿದೆ. ಈ ವರದಿ ಬಂದು ಆರೋಪ ಸಾಬೀತಾದರೆ ಸ್ಥಾನ ತ್ಯಜಿಸಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಕೇಂದ್ರದ ನಾಯಕತ್ವ ಕೂಡ ರಾಜೀನಾಮೆ ಕೊಡಿ ಎಂದೂ ಹೇಳಬೇಕಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ದಾಖಲಿಸಲು ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕೂಡ ಅಚ್ಚರಿ ತಂದಿದೆ. ಯಾರೋ ಇಬ್ಬರು ಅರ್ಜಿ ಕೊಟ್ಟ ತಕ್ಷಣ ಆ ಬಗ್ಗೆ ಕ್ರಮ ಜರುಗಿಸಿದ್ದು ಸರಿಯಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರ ಮೇಲಿನ ಆರೋಪಗಳ ಬಗ್ಗೆ ಪಕ್ಷದಲ್ಲೇ ಆಂತರಿಕ ತನಿಖೆ ನಡೆಯುತ್ತಿದೆ ಎನ್ನುವ ಆರೋಪವನ್ನೂ ಅವರು ತಳ್ಳಿಹಾಕಿದರು. ‘ನನ್ನ ಪ್ರಕಾರ ಹಾಗೆ ಮಾಡುತ್ತಿಲ್ಲ. ಆದರೆ, ಇದನ್ನು ಹೇಳಬೇಕಾದವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು’ ಎಂದರು. ‘ಯಡಿಯೂರಪ್ಪ ಅವರನ್ನು ರಾಜೀನಾಮೆ ಕೊಡಿಸುವ ಉದ್ದೇಶದಿಂದ ಅವರ ಮನವೊಲಿಸಲು

ಸಿಎಂ ಸವಾಲು
ಬೆಂಗಳೂರು: ಸಾವಿರ ಕೋಟಿ  ಮೊತ್ತದ ಬೇನಾಮಿ ಆಸ್ತಿ ಹೊಂದಿರುವುದಾಗಿ ಮಾಡಿರುವ ಆರೋಪ ಸಾಬೀತುಪಡಿಸಿದರೆ 24 ಗಂಟೆಯೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದರು.

ಟಿ.ದಾಸರಹಳ್ಳಿಯ ಕಾಳಾಸ್ತ್ರಿನಗರದಲ್ಲಿ ಬಿಬಿಎಂಪಿ 1.56 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಪ್ರೌಢಶಾಲೆ, ಸಮುದಾಯ ಭವನ ಉದ್ಘಾಟಿಸಿ ಅವರು ಮಾತನಾಡಿದರು. ‘ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಬೇನಾಮಿ ಹೆಸರಿನಲ್ಲಿ ಸಾವಿರ ಕೋಟಿ ರೂಪಾಯಿ ಮೊತ್ತದ ಆಸ್ತಿ ಗಳಿಸಿದ್ದರೆ  ದಾಖಲೆಗಳನ್ನು ಲೋಕಾಯುಕ್ತ ಅಥವಾ ನ್ಯಾಯಾಲಯಕ್ಕೆ ನೀಡಲಿ. ಇಲ್ಲವೇ ಖುದ್ದಾಗಿ ನನಗೇ ನೀಡಲಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.