ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿರುವ ಹೈಕೋರ್ಟ್ ಕ್ರಮವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುವ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಗುರುವಾರ ಇಲ್ಲಿ ಪ್ರತಿಕ್ರಿಯಿಸಿದರು.
ಏಳನೇ `ನ್ಯೂಟ್ರಾ ಇಂಡಿಯಾ~ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ತಾನು ಸಿದ್ಧತೆ ನಡೆಸುತ್ತಿದ್ದೇನೆ ಎಂಬ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿದರು. `ಇಂತಹ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದವು.
ನಿಮ್ಮ ಮಾಹಿತಿ ಸಂಪೂರ್ಣ ತಪ್ಪು. ಈ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ~ ಎಂದು ಹೇಳಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ರಾಜ್ಯಪಾಲರು ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.