ರಾಯಚೂರು: ಕಲ್ಲಿದ್ದಲು ಕೊರತೆ ಕಾರಣ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 2 ಮತ್ತು 8ನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಭಾನುವಾರ ಸ್ಥಗಿತಗೊಳಿಸಿದ್ದು, ಈ ಸಮಸ್ಯೆ ಸೋಮವಾರವೂ ಮುಂದುವರಿಯಿತು. ಸದ್ಯ ಆರು ಆರು ಘಟಕಗಳು ವಿದ್ಯುತ್ ಉತ್ಪಾದಿಸುತ್ತಿವೆ. ಆರ್‌ಟಿಪಿ ಎಸ್‌ಗೆ ದಿನಕ್ಕೆ 25ರಿಂದ 27 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸದ್ಯ 10 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಇದೆ. ಸೋಮವಾರ 6 ರೇಕ್ ಕಲ್ಲಿದ್ದಲು ಪೂರೈಕೆ ಆಗಿದೆ. ಇನ್ನೂ 2 ರೇಕ್ ಪೂರೈಕೆ ಆಗುತ್ತಿದೆ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.