ADVERTISEMENT

ಆಸ್ಪತ್ರೆಯಿಂದ ಕುಮಾರಸ್ವಾಮಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2017, 19:10 IST
Last Updated 2 ಅಕ್ಟೋಬರ್ 2017, 19:10 IST

ಬೆಂಗಳೂರು: ಹೃದಯದ ಕವಾಟ ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು.

ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಸೆಪ್ಟೆಂಬರ್‌ 23ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಜೆ.ಪಿ.ನಗರದ ಮನೆಯಲ್ಲಿ ಇನ್ನೂ ಒಂದು ತಿಂಗಳು ಅವರು ವಿಶ್ರಾಂತಿ ಪಡೆಯಲಿದ್ದಾರೆ. ನವೆಂಬರ್‌ 1 ರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

‘ವೈದ್ಯರ ವಿಶೇಷ ಆರೈಕೆಯಿಂದ ಬಹು ಬೇಗನೇ ಚೇತರಿಸಿಕೊಳ್ಳಲು ಸಾಧ್ಯವಾಗಿದೆ. ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಆದ್ದರಿಂದ ಒಂದು ತಿಂಗಳು ಯಾರನ್ನೂ ಭೇಟಿ ಮಾಡುವುದಿಲ್ಲ’ ಎಂದು ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿ
ಗಳಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.