
ಪ್ರಜಾವಾಣಿ ವಾರ್ತೆವಿಜಾಪುರ: ಇಂಡಿ ತಾಲ್ಲೂಕು ಶಿರಾಡೋಣ ಗ್ರಾಮದ ತೋಟದಲ್ಲಿ ಶುಕ್ರವಾರ ಸಿಡಿಲು ಬಡಿದು ಯುವಕನೊಬ್ಬ ಸಾವಿಗೀಡಾಗಿದ್ದಾನೆ.
ಮೃತನನ್ನು ಸಿದ್ಧರಾಮ ಶರಣಪ್ಪ ಹತ್ತರಕಿ (24) ಎಂದು ಗುರುತಿಸಲಾಗಿದೆ ಎಂದು ಇಂಡಿ ಡಿವೈಎಸ್ಪಿ ಎಂ.ಮುತ್ತುರಾಜ್ ತಿಳಿಸಿದ್ದಾರೆ. ಸಿದ್ಧರಾಮನ ಮದುವೆ ಇದೇ 25ರಂದು ನಿಗದಿಯಾಗಿತ್ತು.
ವಿಜಾಪುರ ನಗರವೂ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗಿದೆ.
ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿಯೂ ತುಂತುರು ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಸುತ್ತಮುತ್ತ ತುಂತುರು ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.