ಬೆಂಗಳೂರು:ಜಂತಕಲ್ ಮೈನಿಂಗ್ ಕಂಪೆನಿಗೆ ಗಣಿ ಗುತ್ತಿಗೆ ನೀಡಲು ಕಾನೂನುಬಾಹಿರವಾಗಿ ಶಿಫಾರಸು ಮಾಡಿರುವುದು ಮತ್ತು ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಗಟು ನಿವೇಶನ ಮಂಜೂರಾತಿ ಆರೋಪ ಕುರಿತ ಪ್ರಕರಣದ ವಿಚಾರಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಸೋಮವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕಿದೆ.
ವಕೀಲರಾದ ವಿನೋದ್‌ಕುಮಾರ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ಆರಂಭಿಸಿರುವ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್. ಕೆ.ಸುಧೀಂದ್ರ ರಾವ್, ಆಗಸ್ಟ್ 30ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು. ಆದರೆ, ಅನಾರೋಗ್ಯದ ಕಾರಣ ನೀಡಿ ಇಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಖುದ್ದು ಹಾಜರಿರುವಂತೆ ಆದೇಶ ಹೊರಡಿಸಿದ್ದರು.
ಖುದ್ದು ಹಾಜರು ಬಗ್ಗೆ ಕುಮಾರಸ್ವಾಮಿ ಮತ್ತು ಅನಿತಾ ಪ್ರತಿಕ್ರಿಯಿಸಿಲ್ಲ. ಇದರಿಂದಾಗಿ ಅವರ ಖುದ್ದು ಹಾಜರಿ ಕುರಿತು ತೀವ್ರ ಕುತೂಹಲ ಸೃಷ್ಟಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.