ADVERTISEMENT

ಇಂದು ಗುಲ್ಬರ್ಗ ವಿವಿ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2012, 19:30 IST
Last Updated 26 ಫೆಬ್ರುವರಿ 2012, 19:30 IST

ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯದ 30ನೇ ವಾರ್ಷಿಕ ಘಟಿಕೋತ್ಸವ  ಸೋಮವಾರ ( ಫೆ. 27)  ಬೆಳಿಗ್ಗೆ ವಿ.ವಿ. ಆವರಣದ ದಿ.ಮಹಾದೇವಪ್ಪ ರಾಂಪುರೆ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ವಿಶ್ರಾಂತ ಸಹಾಯಕ ಮಹಾ ನಿರ್ದೇಶಕ ಡಾ. ಪ್ರೇಮನಾಥ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಮಾಜಿ ಸಚಿವ ಭೀಮಣ್ಣ ಖಂಡ್ರೆ, ಸಮಾಜ ಕಲ್ಯಾಣ ಸಚಿವ ಆನೇಕಲ್ ನಾರಾಯಣಸ್ವಾಮಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ, ಉದ್ಯಮಿ ಅಮರನಾಥ ಗುಪ್ತಾ, ಮೈಸೂರಿನ ವಿದ್ವಾನ್ ಎಂ.ಶಿವಕುಮಾರ ಸ್ವಾಮಿ, ಜಿಡಗಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಅಬ್ಬೆತುಮಕೂರಿನ ಗಂಗಾಧರ ಶಿವಾಚಾರ್ಯ, ದಲಿತ ಮುಖಂಡ ವಿಠ್ಠಲ ದೊಡ್ಮನಿ, ಸಂಡೂರಿನ ಕಲಾವಿದ ವಿ.ಟಿ.ಕಾಳೆ ಹಾಗೂ ಖಾಜಾ ಎಜುಕೇಶನ್ ಸೊಸೈಟಿಯ ನಿರ್ದೇಶಕ ಎಂ.ಎ.ವಾಹಬ್ ಅಂದಲೀಬ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ. ಇ.ಟಿ.ಪುಟ್ಟಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.