ADVERTISEMENT

ಇಂದು ಹೈ.ಕ ಬಂದ್

​ಪ್ರಜಾವಾಣಿ ವಾರ್ತೆ
Published 23 ಜನವರಿ 2012, 19:30 IST
Last Updated 23 ಜನವರಿ 2012, 19:30 IST

ಗುಲ್ಬರ್ಗ: ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂಗೆ  ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಜ. 24ರಂದು ಹೈ.ಕ. ಪ್ರದೇಶದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದ್ದಾರೆ.

ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬಂದ್ ನಡೆಯಲಿದೆ. ಹೋರಾಟಗಾರರು ಆಸ್ಪತ್ರೆ, ಔಷಧ ಅಂಗಡಿ , ಅಂಬುಲನ್ಸ್ ಮತ್ತಿತರ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸದೆ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.