ಬೆಂಗಳೂರು: ನಟ ದರ್ಶನ್ ಆರೋಗ್ಯ ಸುಧಾರಿಸಿದ್ದು ಅವರಿಗೆ ಕಾರಾಗೃಹದಲ್ಲಿ ಚಿಕಿತ್ಸೆ ಮುಂದುವರೆಸುವ ಬಗ್ಗೆ ಅಭಿಪ್ರಾಯ ಕೇಳಿ ರಾಜೀವ್‌ಗಾಂಧಿ ಎದೆ ರೋಗಗಳ ಆಸ್ಪತ್ರೆ ವೈದ್ಯರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ವೈದ್ಯರ ಪತ್ರ ತಲುಪಿದ್ದು, ಈ ಬಗ್ಗೆ ಜೈಲಿನ ವೈದ್ಯರ ಅಭಿಪ್ರಾಯ ಕೇಳಲಾಗಿದೆ. ಆಸ್ತಮ ರೋಗಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಜೈಲಿನಲ್ಲಿ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಪತ್ನಿ ಕೊಲೆ ಬೆದರಿಕೆ ಆರೋಪ ಎದುರಿಸುತ್ತಿರುವ ದರ್ಶನ್ ಹತ್ತು ದಿನಗಳಿಂದ ಆಸ್ಪತ್ರೆಯಲ್ಲೇ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.