ADVERTISEMENT

ಇಬ್ಬರು ಪ್ರಾಧ್ಯಾಪಕರ ಬಂಧನ

ಗುಲಬರ್ಗಾ ವಿ.ವಿ: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಜೂನ್ 2017, 19:50 IST
Last Updated 16 ಜೂನ್ 2017, 19:50 IST
ಇಬ್ಬರು ಪ್ರಾಧ್ಯಾಪಕರ ಬಂಧನ
ಇಬ್ಬರು ಪ್ರಾಧ್ಯಾಪಕರ ಬಂಧನ   

ಕಲಬುರ್ಗಿ: ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗುಲಬರ್ಗಾ ವಿಶ್ವವಿದ್ಯಾಲಯದ ಇಂಗ್ಲಿಷ್‌ ವಿಭಾಗದ ಪ್ರೊ.ರಮೇಶ ರಾಠೋಡ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ವಿಭಾಗದ ಮುಖ್ಯಸ್ಥ ಪ್ರೊ.ವಿ.ಆರ್‌. ಬಡಿಗೇರ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್‌ ನಿರ್ಧಾರದಂತೆ ಇವರಿಬ್ಬರನ್ನು ಕುಲಪತಿ ಪ್ರೊ.ಎಸ್.ಆರ್.ನಿರಂಜನ ಅಮಾನತುಗೊಳಿಸಿದ್ದಾರೆ.

‘ಪಿಎಚ್.ಡಿ ಪ್ರವೇಶಕ್ಕಾಗಿ ಜೂನ್‌ 7ರಂದು ನಡೆದ ಸಂದರ್ಶನದ ವೇಳೆ ಪ್ರೊ.ರಾಠೋಡ ಅಸಭ್ಯವಾಗಿ ವರ್ತಿಸಿ, ವೈಯಕ್ತಿಕ ಪ್ರಶ್ನೆಗಳನ್ನು ಕೇಳಿದ್ದ ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ವಿದ್ಯಾರ್ಥಿನಿಯೊಬ್ಬರು ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

‘ಬಡಿಗೇರ ಅವರು ವಿದ್ಯಾರ್ಥಿನಿಯನ್ನು ಬಳಸಿಕೊಂಡು ನನ್ನ ವಿರುದ್ಧ ಅಸಭ್ಯ ವರ್ತನೆ ಆರೋಪ ಹೊರಿಸಿದ್ದಾರೆ. ಅಲ್ಲದೆ, ಕೆಲ ಹಳೆಯ ವಿದ್ಯಾರ್ಥಿಗಳಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿ ಪ್ರೊ. ರಾಠೋಡ ಅವರು ಪ್ರೊ, ಬಡಿಗೇರ ವಿರುದ್ಧ ದೂರು ದಾಖಲಿಸಿದ್ದರು.

ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಡಿವೈಎಸ್‌ಪಿ ಎಸ್.ಎಸ್.
ಹುಲ್ಲೂರ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT