ADVERTISEMENT

ಉಚಿತ ನೇತ್ರ ತಪಾಸಣೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2012, 19:30 IST
Last Updated 17 ಫೆಬ್ರುವರಿ 2012, 19:30 IST

ಯಲಹಂಕ: ಕೃಷ್ಣಬೈರೇಗೌಡ ಸ್ವಯಂ ಸೇವಕರ ಸಂಘ ಹಾಗೂ ಪ್ರಾಜೆಕ್ಟ್- ದೃಷ್ಠಿ ಸೋಲಂಕಿ ಕಣ್ಣಿನ ಆಸ್ಪತ್ರೆಯವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ, ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ಹಾಗೂ ಹಿರಿಯ ನಾಗರಿಕರ ಗುರುತಿನ ಚೀಟಿ ನೋಂದಣಿ ಕಾರ್ಯಕ್ರಮವನ್ನು ಬ್ಯಾಟರಾಯನಪುರ ಕ್ಷೇತ್ರದ ಶ್ರೀರಾಮಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಶಿಬಿರದ ಉದ್ಘಾಟನೆಯನ್ನು ಸಮಾಜ ಸೇವಕಿ ಮೀನಾಕ್ಷಿ ಶೇಷಾದ್ರಿ ಅವರು, ನೆರವೇರಿಸಿದರು. ಶಿಬಿರದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಅಗತ್ಯವಿದ್ದ 20 ಜನರನ್ನು ಗುರುತಿಸಿ, ಶಸ್ತ್ರ ಚಿಕಿತ್ಸೆಗಾಗಿ ಡಾ.ಸೋಲಂಕಿ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. 50 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸ ಲಾಯಿತು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರವಿಕುಮಾರ್ ಮೊದಲಾ ದವರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.