ಉಡುಪಿ: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಪ್ರತಿನಿಧಿಸಿದ್ದ ಕ್ಷೇತ್ರ ಎಂಬ ಹಿನ್ನೆಲೆಯಲ್ಲಿ ರಾಜ್ಯದ ಕುತೂಹಲ ಕೆರಳಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಬುಧವಾರ ಬೆಳಿಗ್ಗೆ 8ಕ್ಕೆ ಆರಂಭವಾಗಲಿದ್ದು ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ.
ಒಟ್ಟು 16 ಸುತ್ತುಗಳಲ್ಲಿ ಮತ ಎಣಿಕೆ ಪೂರ್ಣಗೊಳ್ಳಲಿದೆ. ಒಂದು ಸುತ್ತಿಗೆ 108 ಮತಯಂತ್ರಗಳ ಎಣಿಕೆ ನಡೆಯ ಲಿದೆ ಎಂದು ಚುನಾವಣಾಧಿಕಾರಿ ಎಂ.ಟಿ.ರೇಜು ಮಂಗಳವಾರ ಮಾಧ್ಯಮ ಗಳಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.