
ಪ್ರಜಾವಾಣಿ ವಾರ್ತೆಬೆಂಗಳೂರು: ಒಂದಿಲ್ಲೊಂದು ಕಾರಣಕ್ಕೆ ಮುಂದಕ್ಕೆ ಹೋಗುತ್ತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಹೊಸದೊಂದು ಗಡುವು ನಿಗದಿಯಾಗಿದೆ. ಈ ಬಾರಿಯ ಗಡುವು ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ.
ಕೊಪ್ಪಳ ಉಪಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಭಾನುವಾರ ಘೋಷಿಸಿದರು.
ಕೇರಳ ಸಮಾಜದವರು ಇಲ್ಲಿ ಏರ್ಪಡಿಸಿದ್ದ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, `ಕೊಪ್ಪಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಭಾರಿ ಅಂತರದಿಂದ ಜಯ ಗಳಿಸುತ್ತಾರೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.