ADVERTISEMENT

ಉಪನ್ಯಾಸಕರ ಹುದ್ದೆಗೆ ಸಂದರ್ಶನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2012, 19:30 IST
Last Updated 9 ಜನವರಿ 2012, 19:30 IST

ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್‌ಗಳ ವಿಜ್ಞಾನ ಉಪನ್ಯಾಸಕರ 44 ಹುದ್ದೆಗಳಿಗೆ ಇದೇ 16 ಮತ್ತು 17ರಂದು ಸಂದರ್ಶನ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಡಿ.ಎಸ್.ವಿಶ್ವನಾಥ್ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸಂದರ್ಶನ ಪತ್ರಗಳನ್ನು ಕಳುಹಿಸಲಾಗಿದೆ. ಒಂದು ವೇಳೆ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಪತ್ರ ತಲುಪದೆ ಇದ್ದರೆ ಆಯೋಗದ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: http://kpsc.kar.nic.in  ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.