ಉಡುಪಿ: ಸೋದೆ ಮಠದ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಮಠಕ್ಕೆ ಆಹ್ವಾನ ನೀಡದ ಹಿನ್ನೆಲೆಯಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಪ್ರತಿಯಾಗಿ ಪೇಜಾವರ ಸ್ವಾಮೀಜಿ ಆರಂಭಿಸಿದ್ದ ಉಪವಾಸವನ್ನು ಕೊನೆಗೊಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಸಂದಾನದ ಫಲವಾಗಿ ಇಬ್ಬರೂ ಸ್ವಾಮೀಜಿಗಳು ಉಪವಾಸ ಕೈಬಿಡಲು ಮಂಗಳವಾರ ರಾತ್ರಿ ಒಪ್ಪಿದರು. ಮುಖ್ಯಮಂತ್ರಿ ಮಧ್ಯ ಪ್ರವೇಶದಿಂದ ಸದ್ಯಕ್ಕೆ ಉಪವಾಸದ ವಿಚಾರ ಬಗೆಹರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.