
ಪ್ರಜಾವಾಣಿ ವಾರ್ತೆಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಗುರುವಾರ ರಾಜಭವನದಲ್ಲಿ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ರಾಜ್ಯಸಭಾ ಸದಸ್ಯ ಎಂ.ರಾಮಾ ಜೋಯಿಸ್, ಮಾಜಿ ರಾಜ್ಯಪಾಲರಾದ ವಿ.ಎಸ್.ರಮಾದೇವಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ, ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತ ಎ.ಕೆ.ಎಂ.ನಾಯಕ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ, ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ನಿವೃತ್ತ ಹಾಗೂ ಹಾಲಿ ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.