ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ 20 ಸ್ಥಾನಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದೆ.
ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 15 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಪಕ್ಷೇತರರು ಜಯ ಗಳಿಸಿದ್ದಾರೆ. ಉಳಿದಂತೆ ಬಿಜೆಪಿ ನಾಲ್ಕು, ಜೆಡಿಎಸ್ ಮೂರು ಮತ್ತು ಕಾಂಗ್ರೆಸ್ ಎರಡು ಸ್ಥಾನಗಳನ್ನು ಗಳಿಸಿವೆ.
ಜಿಲ್ಲಾ ಪಂಚಾಯಿತಿಯ ಎರಡು ಸ್ಥಾನಗಳ ಪೈಕಿ ಬಿಜೆಪಿ, ಕಾಂಗ್ರೆಸ್ ತಲಾ ಒಂದು ಸ್ಥಾನ ಗಳಿಸಿವೆ. ತಾಲ್ಲೂಕು ಪಂಚಾಯಿತಿಯ ಮೂರು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಎರಡು ಪಡೆದಿದೆ. ಬಿಜೆಪಿ ಒಂದು ಸ್ಥಾನ ಗಳಿಸಿದೆ. ಒಟ್ಟಾರೆ ಬಿಜೆಪಿ ಆರು, ಕಾಂಗ್ರೆಸ್ ಐದು ಮತ್ತು ಜೆಡಿಎಸ್ ಮೂರು ಸ್ಥಾನಗಳನ್ನು ಗಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.