ADVERTISEMENT

ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2011, 19:00 IST
Last Updated 1 ಏಪ್ರಿಲ್ 2011, 19:00 IST

ತುಮಕೂರು: ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಇಲ್ಲಿ ಹೇಳಿದರು.

ಸಿದ್ದಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿಗೆ 104 ವಸಂತಗಳಿಗೆ ಕಾಲಿಟ್ಟ ಹಿನ್ನೆಲೆಯಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಜತೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಾಗಿ ತಿಳಿಸಿದರು.

ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ನಿರೀಕ್ಷೆಗೂ ಮೀರಿ ಮತದಾರರ ಬೆಂಬಲ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳ ಟೀಕೆ, ಸುಳ್ಳಿನ ಪ್ರಚಾರಕ್ಕೆ ಮತ ದಾರರು ತಕ್ಕ ಪಾಠ ಕಲಿಸಲಿದ್ದಾರೆ. ಮೂರು ಕ್ಷೇತ್ರಗಳಲ್ಲೂ ಪಕ್ಷ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿದ್ಯುತ್ ಸಮಸ್ಯೆ ಬಗ್ಗೆ ಗಮನ ಸೆಳೆದಾಗ, ಸರ್ಕಾರ ಶಕ್ತಿ ಮೀರಿ ವಿದ್ಯುತ್ ಪೂರೈಕೆ ಮಾಡುತ್ತಿದೆ. ಇದಕ್ಕಾಗಿ 1500 ಮೆಗಾ ವಾಟ್ ವಿದ್ಯುತ್ ಖರೀದಿಸಿ ನೀಡಲಾಗುತ್ತಿದೆ. ಈಗಿನಂತೆಯೇ ಜೂನ್ ವರೆಗೂ ವಿದ್ಯುತ್ ಪೂರೈಕೆ ಮುಂದುವರೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.