ಬೆಂಗಳೂರು: ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ನೀಡುವ ಈ ವರ್ಷದ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಈ ಪ್ರಶಸ್ತಿಯು ₹ 15 ಸಾವಿರ ನಗದು, ಅಭಿನಂದನಾ ಪತ್ರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಜೂನ್ 6ರಂದು ತುಮಕೂರಿನ ಕನ್ನಡ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.