ADVERTISEMENT

ಎಂಬಿಎ, ಎಂಟೆಕ್: ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 19:59 IST
Last Updated 6 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸ್‌ಗಳ ಪ್ರವೇಶಕ್ಕೆ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ. ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಇದೇ 10ರ ಒಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.

ಸರ್ಕಾರಿ ಕೋಟಾ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಿದ್ದು, ಎಂಬಿಎಗೆ 3714, ಎಂಸಿಎಗೆ 3056 ಹಾಗೂ ಎಂ.ಟೆಕ್‌ಗೆ 9927 ವಿದ್ಯಾರ್ಥಿಗಳು ಸೀಟು ಆಯ್ಕೆ ಮಾಡಿಕೊಂಡಿದ್ದಾರೆ.

ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಎಂಬಿಎನಲ್ಲಿ 9706, ಎಂಸಿಎನಲ್ಲಿ 2368, ಎಂ.ಟೆಕ್‌ನಲ್ಲಿ 205 ಸೀಟುಗಳು ಖಾಲಿ ಇವೆ. ಎರಡನೇ ಸುತ್ತಿನ ಕೌನ್ಸೆಲಿಂಗ್‌ಗೆ ಆನ್‌ಲೈನ್ ಮೂಲಕ ಆದ್ಯತೆಗಳನ್ನು ಗುರುತಿಸುವ ಪ್ರಕ್ರಿಯೆ ಇದೇ 16ರಿಂದ ಆರಂಭವಾಗಲಿದೆ.

16ರಿಂದ 18ರವರೆಗೆ ಆದ್ಯತೆ ಗುರುತಿಸಲು ಅವಕಾಶ ಇದೆ. 19ರಂದು ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಸೀಟು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳು 21ರ ಒಳಗೆ ಶುಲ್ಕ ಪಾವತಿಸಬೇಕು. ಇದೇ 23ರ ಒಳಗೆ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.