ADVERTISEMENT

ಎಚ್‌ಡಿಕೆ ಮನಸ್ಸು ಬಿಜೆಪಿ ಕಡೆ ವಾಲುತ್ತಿಲ್ಲ

ಸಿದ್ಧಗಂಗಾ ಮಠದ ಶ್ರೀಗಳ ಆಶೀರ್ವಾದ ಪಡೆದ ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 29 ಮೇ 2018, 20:09 IST
Last Updated 29 ಮೇ 2018, 20:09 IST
ಆಶೀರ್ವಾದ ಪಡೆಯಲು ಬಂದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರೊಂದಿಗೆ ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಮಾತನಾಡಿದರು
ಆಶೀರ್ವಾದ ಪಡೆಯಲು ಬಂದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರೊಂದಿಗೆ ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಮಾತನಾಡಿದರು   

ತುಮಕೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನಸ್ಸು ಬಿಜೆಪಿ ಪರ ವಾಲುತಿದೆ ಅನ್ನುವುದು ಸತ್ಯಕ್ಕೆ ದೂರವಾದ ಮಾತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ಔಪಚಾರಿಕ ಭೇಟಿಗೆ ಬೇರೆ ಅರ್ಥ ಸೃಷ್ಟಿಸುವುದು ಬೇಡ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ಮಂಗಳವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಪೂರ್ಣಾವಧಿವರೆಗೆ ಇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಆ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ ಎಂದರು.

ADVERTISEMENT

11 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿಯಲ್ಲಿಯೂ ಯಾವುದೇ ಹುರುಳಿಲ್ಲ. ಅವೆಲ್ಲ ಊಹಾಪೋಹಗಳು. ಯಾವೊಬ್ಬ ಶಾಸಕರೂ ನಮ್ಮ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಎರಡೂ ಪಕ್ಷಗಳ ನಡುವೆ ಯಾವುದೇ ಗೊಂದಲಗಳಿಲ್ಲ. ಒಂದು ವೇಳೆ ಗೊಂದಲ ಉಂಟಾದರೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.