
ಪ್ರಜಾವಾಣಿ ವಾರ್ತೆಕೊಪ್ಪಳ: ಲೋಕಾಯುಕ್ತ ಅಧಿಕಾರಿಗಳು ತಮ್ಮ ಪುತ್ರರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುವ ವಿಚಾರ ಸೋಮವಾರವೇ ತಿಳಿದಿತ್ತು. ಇದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರದೇ ಷಡ್ಯಂತ್ರ.
ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕ್ರಿಯೆ.
ಪಕ್ಷದ ಅಭ್ಯರ್ಥಿ ಪರ ಚುನಾವಣೆ ಪ್ರಚಾರಕ್ಕಾಗಿ ಮಂಗಳವಾರ ಬಂದಿದ್ದ ಅವರನ್ನು ಹುಲಗಿ ಗ್ರಾಮದಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
`ಕೇವಲ ಪುತ್ರರ ಮನೆಗಳ ಮೇಲಷ್ಟೇ ಅಲ್ಲ. ಅವರ ಗೆಳೆಯರ ಹಾಗೂ ನನ್ನ ಮನೆಯ ಮೇಲೂ ದಾಳಿ ನಡೆಸಲಿ. ನನ್ನ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಹಬ್ಬುವ ಬದಲು ಒಂದೇ ಬಾರಿಗೆ ಎಲ್ಲವೂ ಜನರಿಗೆ ಗೊತ್ತಾಗಲಿ. ಈ ದಾಳಿಯಿಂದ ಸತ್ಯ ಏನೆಂಬುದು ಬಯಲಾಗಲಿ~ ಎಂದು ಅಭಿಪ್ರಾಯಪಟ್ಟರು.
ನಗರದಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ರಾಜೀನಾಮೆ ನೀಡಿರುವುದು ದುರದೃಷ್ಟಕರ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.