ADVERTISEMENT

ಎಚ್1ಎನ್1 ಸೋಂಕು: ರಾಜ್ಯದಲ್ಲಿ 3 ಸಾವು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2012, 19:30 IST
Last Updated 5 ಏಪ್ರಿಲ್ 2012, 19:30 IST

ಬೆಂಗಳೂರು: ಕಳೆದ ವರ್ಷ ಸಾರ್ವಜನಿಕರನ್ನು ತಲ್ಲಣಗೊಳಿಸಿದ್ದ ಮಹಾಮಾರಿ ಎಚ್1 ಎನ್1 ಸೋಂಕು ಮತ್ತೆ ರಾಜ್ಯದಲ್ಲಿ ಮರುಕಳಿಸಿ ಮೂರು ಮಂದಿಯನ್ನು ಬಲಿತೆಗೆದುಕೊಂಡಿದೆ.

2012ರ ಜನವರಿಯಿಂದ ಮಾರ್ಚ್‌ವರೆಗೆ ಬೆಂಗಳೂರಿನಲ್ಲಿ ಇಬ್ಬರು ಮತ್ತು ಮಾರ್ಚ್ ತಿಂಗಳಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಒಬ್ಬರು ಎಚ್1ಎನ್1ಗೆ ಬಲಿಯಾಗಿದ್ದಾರೆ. ಈವರೆಗೆ ರಾಜ್ಯದಲ್ಲಿ 475 ಜನರಿಗೆ ಎಚ್1ಎನ್1 ಸೋಂಕು ತಗುಲಿರಬಹುದೆಂದು ಶಂಕಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ 71 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

`ಆರೋಗ್ಯ ಇಲಾಖೆ ಈಗಾಗಲೇ ಜನರಲ್ಲಿ ಎಚ್1ಎನ್1 ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಆರಂಭಿಸಿದೆ ಎಂದು  ಇಲಾಖೆ ನಿರ್ದೇಶಕ ಡಾ.ಸಿ.ಚೆಲುವರಾಜು `ಪ್ರಜಾವಾಣಿ~ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.