ADVERTISEMENT

ಎಸಿಬಿ ಬಲೆಗೆ ಗಣಿ ವಿಜ್ಞಾನಿ ಪುಷ್ಪಲತಾ

​ಪ್ರಜಾವಾಣಿ ವಾರ್ತೆ
Published 24 ಮೇ 2018, 19:30 IST
Last Updated 24 ಮೇ 2018, 19:30 IST
ಕಲ್ಲು ಗಣಿಗಾರಿಕೆ – ಸಾಂದರ್ಭಿಕ ಚಿತ್ರ
ಕಲ್ಲು ಗಣಿಗಾರಿಕೆ – ಸಾಂದರ್ಭಿಕ ಚಿತ್ರ   

ರಾಯಚೂರು: ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

‘ಗಣಿಗಾರಿಕೆಗೆ ಪರವಾನಗಿ ನೀಡಲು ₹1 ಲಕ್ಷ ಲಂಚ ನೀಡುವಂತೆ ಪುಷ್ಪಲತಾ ಬೇಡಿಕೆ ಇಟ್ಟಿದ್ದಾರೆ’ ಎಂದು ಮಸ್ಕಿ ನಿವಾಸಿ ಶ್ರೀಧರ್‌ ಅವರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಡಿವೈಎಸ್‌ಪಿ ಅರುಣಕುಮಾರ, ಪೊಲೀಸ್‌ ಇನ್‌ಸ್ಪೆಕ್ಟರ್‌ ಶ್ರೀಧರ ದೊಡ್ಡಿ ಹಾಗೂ ಸಿಬ್ಬಂದಿ, ಪುಷ್ಪಲತಾ ಅವರ ಕಚೇರಿಯ ಮೇಲೆ ಗುರುವಾರ ದಾಳಿ ನಡೆಸಿದರು.

‘ಪುಷ್ಪಲತಾರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.