
ಪ್ರಜಾವಾಣಿ ವಾರ್ತೆಗದಗ: ಜಿಲ್ಲೆಯ ಲಿಂಬಯ್ಯಸ್ವಾಮಿಮಠ ಪ್ರತಿಭಾ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಬಸವೇಶ್ವರ ಪ್ರಶಸ್ತಿಗೆ ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಎಸ್. ಆರ್.ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ರೂ.50,000 ನಗದು, ಸನ್ಮಾನ ಪತ್ರವನ್ನು ಒಳಗೊಂಡಿದೆ. ಇದೇ 24ರಂದು ತೋಂಟದಾರ್ಯ ಮಠದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ಲಿಂಬಯ್ಯಸ್ವಾಮಿ ಶನಿವಾರ ತಿಳಿಸಿದರು.
ಹಿರೇಮಠ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದಾರೆ. ನೆಲ, ಜಲ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪ್ರಶಸ್ತಿಗೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.